ವಿಟ್ಲಪಿಂಡಿ ಪೂರ್ವತಯಾರಿ

ಉಡುಪಿ, ಆ 24: ಶ್ರೀಕೃಷ್ಣ ಮಠದಲ್ಲಿ ಸೆಪ್ಟೆಂಬರ್ 11ರಂದು ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ರಥಬೀದಿಯಲ್ಲಿ ಗುರ್ಜಿ ನೆಡುವ ಮುಹೂರ್ತವನ್ನು ನೆರವೇರಿಸಲಾಯಿತು.

ಶ್ರೀಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯ ಗಾರರದ ಮುದರಂಗಡಿ ಲಕ್ಷ್ಮೀಶ ಭಟ್, ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂಧಿಗಳು ಉಪಸ್ಥಿತರಿದ್ದರು.