ಪ.ಜಾತಿ, ಪ. ಪಂಗಡ – ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

 ಪ.ಜಾತಿ, ಪ. ಪಂಗಡ – ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Share this post

ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ  ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ಸೆಪ್ಪೆಂಬರ್ 06 ರವರೆಗೆ ವಿಸ್ತರಿಸಲಾಗಿದೆ.
   

ಹೆಚ್ಚಿನ ಮಾಹಿತಿಗಾಗಿ ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್.ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ಅಥವಾ ದೂರವಾಣಿ ಸಂಖ್ಯೆ:0824-2420114 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts