ಪ.ಜಾತಿ ಮತ್ತು ಪ.ಪಂಗಡದ ಉಪಯೋಜನೆಯಡಿ ತರಬೇತಿ ಶಿಬಿರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

 ಪ.ಜಾತಿ ಮತ್ತು ಪ.ಪಂಗಡದ ಉಪಯೋಜನೆಯಡಿ ತರಬೇತಿ ಶಿಬಿರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು ಸೆ 05: 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಯುವಕ/ಯುವತಿಯರಿಗೆ ಜೀವರಕ್ಷಕ (ಲೈಫ್ ಗಾರ್ಡ್), ಜಿಮ್/ಪಿಟ್ನೆಸ್ ತರಬೇತುದಾರರಿಗೆ ಹಾಗೂ ಮಾರ್ಕರ್ (ಕ್ರೀಡಾ ಅಂಕಣ ಗುರುತುಗಾರ)ಗಳಿಗೆ ತರಬೇತಿ ಶಿಬಿರದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಸೆಪ್ಟೆಂಬರ್ 25 ರೊಳಗೆ  ಅರ್ಜಿ ಸಲ್ಲಿಸಬೇಕು.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು. ದೂರವಾಣಿ ಸಂಖ್ಯೆ: 0824-2451264 ಇಲ್ಲಿ ಪಡೆಯಬಹುದು ಎಂದು  ದ.ಕ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!