ಚಾಮುಂಡೇಶ್ವರಿ ಹಾಗೂ ಶ್ರೀಕಂಠೇಶ್ವರ ದರ್ಶನಕ್ಕೆ ಸಮಯ ನಿಗದಿ

 ಚಾಮುಂಡೇಶ್ವರಿ ಹಾಗೂ ಶ್ರೀಕಂಠೇಶ್ವರ ದರ್ಶನಕ್ಕೆ ಸಮಯ ನಿಗದಿ
Share this post


ಮೈಸೂರು, ಸೆಪ್ಟೆಂಬರ್.06: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ ಮತ್ತು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿ ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಚಾಮುಂಡೇಶ್ವರಿ ದೇಗುಲದಲ್ಲಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಮಧ್ಯಾಹ್ನ 3.30 ರಿಂದ ಸಂಜೆ 6 ಗಂಟೆಯವರೆಗೆ, ರಾತ್ರಿ 7.30 ರಿಂದ 8 ಗಂಟೆಯವರೆಗೆ ಹಾಗೂ ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ, ಮಧ್ಯಾಹ್ನ 3.30 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿರುತ್ತಾರೆ.

Subscribe to our newsletter!

Other related posts

error: Content is protected !!