ಕೃಷ್ಣಂ ಚ ಬಲಭದ್ರಂ ಚ…..

ಶ್ರೀ ಕೃಷ್ಣ ಮಠದಲ್ಲಿ ಶುಕ್ರವಾರ ವಿಟ್ಲಪಿಂಡಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಯಶೋದೆ ಕೃಷ್ಣ” ಅಲಂಕಾರ ಮಾಡಿದರು.
ಉಡುಪಿ, ಸೆ 11: ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಮಹಾಪೂಜೆಯನ್ನು ನೆರವೇರಿಸಿದರು.
ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ, ಚಂದ್ರೋದಯ ಸಮಯದಲ್ಲಿ(12 .16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು.
ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.