ಕಡಲ ಕೊರೆತ: ಶಾಶ್ವತ ಪರಿಹಾರಕ್ಕೆ ಒತ್ತು – ಕಪಿಲ್ ಮೋಹನ್

 ಕಡಲ ಕೊರೆತ:  ಶಾಶ್ವತ ಪರಿಹಾರಕ್ಕೆ ಒತ್ತು – ಕಪಿಲ್ ಮೋಹನ್
Share this post

ಮಂಗಳೂರು ಸೆ 16:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ  ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗನೆ ರೂಪಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ, ಬಂದರು  ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮ್ಯಾರಿಟೈಮ್ ಬೋರ್ಡ್ ಸಿಇಓ ಕಪಿಲ್ ಮೋಹನ್ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲೆಯ ವಿವಿದೆಡೆ ಕಡಲಕೊರೆತ ನಿಯಂತ್ರಣಕ್ಕೆ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಕರಾವಳಿಯ ಬಹುತೇಕ ಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡುವುದರಿಂದ ಜಿಲ್ಲೆಯಲ್ಲಿ ಕಡಲ ಕೊರೆತದ ಸಮಸ್ಯೆಗಳು ಕಡಿಮೆಯಾಗಲಿದೆ. ಮುಂದಿನ ದಿನದಲ್ಲಿ ಕಡಲ ಕೊರೆತವಾಗುವ ಭಾಗಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣವನ್ನು ಮಾಡುವಂತೆ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು

ಕಪಿಲ್ ಮೋಹನ್

ಉನ್ನತ ತಾಂತ್ರಿಕತೆಯ ನೆರವಿನಿಂದ ಕಡಲಕೊರೆತಕ್ಕೆ  ಶಾಶ್ವತವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಉಳ್ಳಾಲ ಮುಕ್ಕಚ್ಚೇರಿ ಬಳಿ ಈ ರೀತಿಯ ಕಾಮಗಾರಿ ನಡೆಸಲಾಗಿದ್ದು,  ಇದರಿಂದ ಈ ವರ್ಷ ಈ ಪ್ರದೇಶದಲ್ಲಿ ಕಡಲಕೊರೆತ ಸಮಸ್ಯೆ ಎದುರಾಗಿರುವುದಿಲ್ಲ ಎಂದು ಅವರು ಹೇಳಿದರು.

ಉಳ್ಳಾಲ ಮುಕ್ಕಚ್ಚೇರಿ ಕಡಲ ತೀರದಲ್ಲಿ ಎಡಿಬಿ ನೆರವಿನ ಕಾಮಗಾರಿಯ ಅಡಿಯಲ್ಲಿ ನಡೆಯುತ್ತಿರುವ ರೂ. 1802 ಲಕ್ಷದಲ್ಲಿ 635 ಮೀಟರ್ ಮತ್ತು 10 ಮೀಟರಿನ ಸಂರಕ್ಷಣೆ ತಡೆಗೋಡೆಯ ಪುನರ್ವಸತಿ ಯೋಜನೆಯ ಕಾಮಗಾರಿಯನ್ನು ಅವರು ಪರಿಶೀಲನೆ ನಡೆಸಿದರು.

ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ, ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕರಾವಳಿಯ ಬಹುತೇಕ ಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡುವುದರಿಂದ ಜಿಲ್ಲೆಯಲ್ಲಿ ಕಡಲ ಕೊರೆತದ ಸಮಸ್ಯೆಗಳು ಕಡಿಮೆಯಾಗಲಿದೆ. ಮುಂದಿನ ದಿನದಲ್ಲಿ ಕಡಲ ಕೊರೆತವಾಗುವ ಭಾಗಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣವನ್ನು ಮಾಡುವಂತೆ ಸರ್ಕಾರಕ್ಕೆ ವರದಿಯನ್ನು ನೀಡಲಾಗುವುದು ಎಂದು ಕಪಿಲ್ ಮೋಹನ್ ತಿಳಿಸಿದರು.

ಸೋಮೇಶ್ವರದ ಕೆಲವು ಭಾಗದಲ್ಲಿ ಕಡಲ ಕೊರೆತವು ಹೆಚ್ಚಾಗಿದೆ. ಕೊರೆತವನ್ನು ತಪ್ಪಿಸುವ ಸಲುವಾಗಿ ಸರ್ಕಾರವು ಹಲವು ಯೋಜನೆಯ ಮುಖಾಂತರ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದು, ಕಡಲ ಕೊರೆತವಾಗಿರುವ ಭಾಗಗಳಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಾಣವನ್ನು ಮಾಡಲಾಗುತ್ತಿದ್ದು,  ಮುಂದಿನ ದಿನಗಳಲ್ಲಿ ಹಾನಿಗೆ ಒಳಗಾದ ಪ್ರದೇಶಗಳಿಗೆ ಶಾಶ್ವತ ಪರಿಹಾರ ನೀಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಯೋಜನೆಯನ್ನು ರೂಪಿಸುವ ಸಲುವಾಗಿ ಅಧಿಕಾರಿಗಳು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪೂರ್ಣವಾದ ಮಾಹಿತಿವನ್ನು ಪಡೆದು ಅದರ ವರದಿಯನ್ನು ಸರ್ಕಾರಕ್ಕೆ ನೀಡಬೇಕು ಅವರು ತಿಳಿಸಿದರು.

ಕಪಿಲ್ ಮೋಹನ್ ಅವರು ಬುಧವಾರ ತಣ್ಣೀರುಬಾವಿ ಭಾರತಿ ಶಿಪ್‍ಯಾರ್ಡ್, ಬೆಂಗರೆ ಜೆಟ್ಟಿ, ಅಳಿವೆ ಬಾಗಿಲು, ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಮುಕ್ಕಚ್ಚೇರಿ ಪ್ರದೇಶಗಳಿಗೆ ಭೇಟಿ ನೀಡಿ, ಬಂದರು ಇಲಾಖೆ ಹಾಗೂ ಎಡಿಬಿ ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ  ಸುಸ್ಥಿರ ಕರಾವಳಿ ತೀರ ಸಂರಕ್ಷಣೆ ಹಾಗೂ ನಿರ್ವಹಣಾ ಯೋಜನೆ ಅಧಿಕಾರಿಗಳಾದ ಗೋಪಾಲ ನಾಯ್ಕ್, ಉಪನಿರ್ದೇಶಕ ಮುಹಮ್ಮದ್  ಹನೀಫ್ ಮತ್ತಿತರರು ಇದ್ದರು.

Subscribe to our newsletter!

Other related posts

error: Content is protected !!