ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ

 ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ
Share this post

ಮಂಗಳೂರು ಸೆ 24: ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು.

ಏಪ್ರಿಲ್ 1, 2015 ರ ಪೂರ್ವದಲ್ಲಿ ನೋಂದಣಿಯಾದ ಜನನ ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಘಟನೆಗಳು ನೋಂದಣಿಯಾದ ತಾಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ನೋಂದಣಿಯಾದ ಜನನ ಮರಣ ಘಟನೆಗಳನ್ನು ಹೆಸರು, ದಿನಾಂಕ, ತಂದೆ, ತಾಯಿಯ ಹೆಸರು ನಮೂದಿಸಿ ಪ್ರಮಾಣ ಪತ್ರಗಳನ್ನು ಹುಡುಕಬಹುದು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊರಗಡೆ ನೋಂದಣಿಯಾದ ಜನನ ಮರಣ ಘಟನೆಗಳ ಪ್ರಮಾಣ ಪತ್ರಗಳನ್ನು ಹುಡುಕಲು ನೋಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯತಿಗಳಲ್ಲಿ ಪ್ರತಿಯೊಂದು ಜನನ ಮರಣ ಪ್ರಮಾಣ ಪತ್ರದ ಪ್ರತಿಗಳಿಗೆ ರೂ. 5 ಶುಲ್ಕ ಪಾವತಿಸಬೇಕು ಎಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಅಪರ ಜಿಲ್ಲಾ ಜನನ ಮರಣಗಳ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!