ಅ. 1 ರಿಂದ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ಮತ್ತು ರಾಜಹಂಸ ಬಸ್ ಪ್ರಾರಂಭ
ಮಂಗಳೂರು ಸೆ 29:– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 1 ರಿಂದ ಪ್ರಾರಂಭಿಸಲಾಗುತ್ತದೆ.
ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ (Standard Operating Procedure) ಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ.
ಮಾರ್ಗದ ಸಾರಿಗೆ ಕಾರ್ಯಾಚರಣೆಯ ವಿವರ ಇಂತಿದೆ:- ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ಬಸ್ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು, ಹೈದರಾಬಾದ್ಗೆ ಮಾರನೇ ದಿನ ಬೆಳಿಗ್ಗೆ 8.30 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 1,700.
ಹೈದರಾಬಾದ್ನಿಂದ ಸಂಜೆ 5 ಗಂಟೆಗೆ ಹೊರಟು ರಾಯಚೂರು, ಕೊಪ್ಪಳ, ಗದಗ, ಹುಬ್ಬಳ್ಳಿ, ಭಟ್ಕಳ, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್, ಮಂಗಳೂರಿಗೆ ಮಾರನೇ ದಿನ ಬೆಳಿಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 1,700.
ರಾಜಹಂಸ ಬಸ್ ಉಡುಪಿಯಿಂದ ಬೆಳಿಗ್ಗೆ 11.30 ಗಂಟೆಗೆ ಹೊರಟು ಮಣಿಪಾಲ್, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪ್ಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು, ಹೈದರಾಬಾದ್ಗೆ ಮಾರನೇ ದಿನ ಬೆಳಿಗ್ಗೆ 6.30 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 970.
ಹೈದರಾಬಾದ್ನಿಂದ ಸಂಜೆ 5.30 ಗಂಟೆಗೆ ಹೊರಟು ಹರಪ್ಪನಹಳ್ಳಿ, ಹರಿಹರ, ಶಿವಮೊಗ್ಗ, ತೀರ್ಥಹಳ್ಳಿ, ಸಿದ್ದಾಪುರ, ಕುಂದಾಪುರ, ಮಣಿಪಾಲ್, ಉಡುಪಿಗೆ ಮಾರನೇ ದಿನ ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 970.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು ಸಾರ್ವಜನಿಕರು ಸದರಿ ಸಾರಿಗೆಯ ಸದುಪಯೋಗವನ್ನು ಪಡೆದುಕೊಳ್ಳುಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.