ಅ 5 ಮತ್ತು 6 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ

 ಅ 5 ಮತ್ತು 6 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ
Share this post

ಮಂಗಳೂರು ಅ:  ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ ಶುಚಿಗೊಳಿಸುವ ಕೆಲಸ ನಡೆಯಲಿದೆ.

ಈ ಕಾರಣದಿಂದ ಅಕ್ಟೋಬರ್  5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್  6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್‍ನಗರ, ಮುಳಿಹಿತ್ಲು, ಕಾರ್‍ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್‍ಬ್ಯಾಂಕ್  ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದು.

Subscribe to our newsletter!

Other related posts

error: Content is protected !!