ಅ 5 ಮತ್ತು 6 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ
ಮಂಗಳೂರು ಅ: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್ವೆಲ್ ಶುಚಿಗೊಳಿಸುವ ಕೆಲಸ ನಡೆಯಲಿದೆ.
ಈ ಕಾರಣದಿಂದ ಅಕ್ಟೋಬರ್ 5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್ನಗರ, ಮುಳಿಹಿತ್ಲು, ಕಾರ್ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ಬ್ಯಾಂಕ್ ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದು.