ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ

 ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮ
Share this post

ಮಂಗಳೂರು ಅ 05: ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ 1 ರ ಆದೇಶ ತೆರವು -5 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಕ್ರಾಂಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಈ ಕೆಳಗಿನಂತೆ ಆದೇಶ ಹೊರಡಿಸಿರುತ್ತಾರೆ.

ಶಿಕ್ಷಣ

ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು 15 ನೇ ಅಕ್ಟೋಬರ್ 2020 ರ ನಂತರ ಹಂತ-ಹಂತವಾಗಿ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ.

ಸಂಬಂಧಪಟ್ಟ ಶಾಲೆಯ/ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಮತ್ತು ಈ ಕೆಳಕಂಡ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

ಆನ್ ಲೈನ್ /ದೂರಶಿಕ್ಷಣ ಕಲಿಕೆಗಳಿಗೆ ಆದ್ಯತಾನುಸಾರ ಅನುಮತಿ ಮುಂದುವರಿಸಬೇಕು ಮತ್ತು ಪ್ರೋತ್ಸಾಹಿಸಲಾಗುವುದು.  

ಶಾಲೆಗಳು ಆನ್ ಲೈನ್  ತರಗತಿಗಳನ್ನು ನಡೆಸುತ್ತಿದ್ದು, ಕೆಲವು ವಿದ್ಯಾರ್ಥಿಗಳು ಖುದ್ದಾಗಿ ಶಾಲೆಗೆ ಹಾಜರಾಗುವುದಕ್ಕೆ ಬದಲಾಗಿ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಆಯ್ಕೆ ಮಾಡಿಕೊಂಡಲ್ಲಿ, ಹಾಗೆ ಮಾಡಲು ಅವರಿಗೆ ಅನುಮತಿ ನೀಡುವುದು.  

ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿ ಮತ್ತು ಪೆÇೀಷಕರ ಲಿಖಿತ ಅನುಮತಿಯೊಂದಿಗೆ ಮಾತ್ರವೇ ಶಾಲೆಗಳಿಗೆ /ಸಂಸ್ಥೆಗಳಿಗೆ ಹಾಜರಾಗಬಹುದಾಗಿದೆ.  

ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು ಮತ್ತು ಅದು ಸಂಪೂರ್ಣವಾಗಿ ಪೆÇೀಷಕರ ಅನುಮತಿಯ ಮೇಲೆ ಅವಲಂಬಿತವಾಗಿರಬೇಕು.  

ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸಿ ಸ್ಥಳೀಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಶಿಕ್ಷಣ ಮಂತ್ರಾಲಯ ಭಾರತ ಸರ್ಕಾರ ಇವರು ಹೊರಡಿಸಲಿರುವ ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ (SOP) ಯನ್ನು ಶಾಲೆಗಳು/ ಸಂಸ್ಥೆಗಳು ಪಾಲಿಸಬೇಕು.    

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಕಾಲೇಜುಗಳು/ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಸಮಯ ಕುರಿತಂತೆ ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಮಂತ್ರಾಲಯ , ಭಾರತ ಸರ್ಕಾರದ ಇದರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧಾರಣೆಯ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಿದ್ದು, ಆನ್ ಲೈನ್ /ದೂರಶಿಕ್ಷಣ ಕಲಿಕೆಗಳಿಗೆ ಆದ್ಯತಾನುಸಾರ ಅನುಮತಿ ಮುಂದುವರಿಸಬೇಕು ಮತ್ತು ಪೆÇ್ರೀತ್ಸಾಹಿಸಬೇಕು.  

ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ವಿಜ್ಞಾನ ಮತ್ತು ತಂತ್ರಾಜ್ಞಾನ ಅಧ್ಯಯನ ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ 15 ಅಕ್ಟೋಬರ್ 2020 ರಿಂದ ಈ ಕೆಳಕಂಡಂತೆ ಅನುಮತಿ ನೀಡಲಾಗುವುದು.

ಕೇಂದ್ರ ಹಣಕಾಸು ನೆರವಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ , ಸಂಸ್ಥೆಯ ಮುಖ್ಯಸ್ಥರು ವಿಜ್ಞಾನ ಮತ್ತು ತಂತ್ರಜ್ಞಾನ ಆಧ್ಯಯನ ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತರ ವಿದ್ಯಾರ್ಥಿಗಳು ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳಿಗಾಗಿ ಕಾಲೇಜುಗಳಿಗೆ ಹಾಜರಾಗುವುದು ಅತ್ಯಗತ್ಯವಿದೆ ಎಂಬುದನ್ನು ಸ್ವತ: ಮನವರಿಕೆ ಮಾಡಿಕೊಳ್ಳಲಾಗುವುದು.    

ವಿಶ್ವವಿದ್ಯಾಲಯಗಳು , ಖಾಸಗಿ ವಿಶ್ವವಿದ್ಯಾಲಯಗಳು ಮೊದಲಾದ ಇತರೆ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ತೆಗೆದುಕೊಳ್ಳುವ ತೀರ್ಮಾನಕ್ಕನುಸಾರವಾಗಿ ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಅಧ್ಯಯನ ವಿಷಯದಲ್ಲಿನ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಲಾಗುವುದು.

ಕ್ರೀಡೆ :

ಕ್ರೀಡಾಪಟುಗಳ ತರಬೇತಿಗಾಗಿ ಬಳಸುತ್ತಿರುವ ಈಜುಕೊಳಗಳನ್ನು ಪ್ರಸಕ್ತ ಸಾಲಿನ ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ತೆರೆಯಲು ಅನುಮತಿ ನಿಡಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತ ಸರ್ಕಾರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯ ಮಾದರಿ ಕಾರ್ಯುನಿರ್ವಹಣಾ ಪ್ರಕ್ರಿಯೆ (SOP) ಯನ್ನು ಹೊರಡಿಸಲಿವೆ.

ಮನೋರಂಜನೆ:

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರವೇ ಸಿನಿಮಾ ಮಂದಿರಗಳು / ರಂಗಮಂದಿರಗಳು / ಮಲ್ಟಿಫ್ಲೆಕ್ಸ್ ಗಳನ್ನು  ಪ್ರಸಕ್ತ ಸಾಲಿನ ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ಅವುಗಳ ಒಟ್ಟು ಆಸನ ಸಾಮಥ್ರ್ಯದ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಿ ತೆರೆಯಲು ಅನುಮತಿಸಲಾಗುವುದು.

ಇದಕ್ಕಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಚಾರ ಮಂತ್ರಾಲಯಗಳು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ (SOP) ಯನ್ನು ಹೊರಡಿಸಲಿವೆ.  

ಮನೋರಂಜನಾ ಉದ್ಯಾನಗಳು ಮತ್ತು ಅದೇ ರೀತಿಯ ಸ್ಧಳಗಳನ್ನು ಪ್ರಸಕ್ತ ಸಾಲಿನ ಅಕ್ಟೋಬರ್ 15  ರಿಂದ ಜಾರಿಗೆ ಬರುವಂತೆ ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ (SOP)ಯನ್ನು ಹೊರಡಿಸಲಿವೆ.

ವ್ಯಾಪರ- ವ್ಯವಹಾರ:

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ವ್ಯಾಪಾರದಿಂದ ವ್ಯಾಪಾರಕ್ಕೆ ಪ್ರದರ್ಶನಗಳನ್ನು ಪ್ರಸಕ್ತ ಸಾಲಿನ ಅಕ್ಟೋಬರ್ 15 ರಿಂದ ತೆರೆಯಲು ಅನುಮತಿಸಲಾಗುವುದು. ಇದಕ್ಕಾಗಿ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಭಾರತ ಸರ್ಕಾರದ ವಾಣಿಜ್ಯ ಇಲಾಖೆಗಳು ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ (SOP) ಯನ್ನು ಹೊರಡಿಸಲಿವೆ.  

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಗರಿಷ್ಠ 100 ಜನರ ಪರಿಮಿತಿಗೆ ಒಳಪಟ್ಟು ಸಾಮಾಜಿಕ/ ಶೈಕ್ಷಣಿಕ/ ಕ್ರೀಡೆ / ಮನೋರಂಜನೆ/ ಸಾಂಸ್ಕøತಿಕ/ ಧಾರ್ಮಿಕ/ ರಾಜಕೀಯ ಕಾರ್ಯಕ್ರಮಗಳು ಮತ್ತು ಇತರ ಸಮಾರಂಭಗಳಿಗೆ ಈಗಾಗಲೇ ಅನುಮತಿ ನೀಡಲಾಗಿದೆ.

100 ಜನರ ಮಿತಿಯನ್ನು ಮೀರಿ ಸೇರುವ ಅಂತಹ ಬೃಹತ್ ಸಭೆಗಳಿಗೆ ಪ್ರಸಕ್ತ ಸಾಲಿನ ಅಕ್ಟೋಬರ್ 15 ರ ನಂತರ ಮತ್ತು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಮಂಗಳೂರು ಮಹಾನಗರ ಪಾಲಿಕೆ/ಸ್ಥಳೀಯ ಸಂಸ್ಥೆಗಳು ಕಂಟೈನ್‍ಮೆಂಟ್ ವಲಯಗಳ ಹೊರಗೆ ಅನುಮತಿಯನ್ನು ನೀಡಬಹುದಾಗಿದೆ.

ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾ ಭವನದ ಒಟ್ಟು ಸಾಮಥ್ರ್ಯದ ಗರಿಷ್ಠ ಶೇ.50% ರಷ್ಟಕ್ಕೆ ಮಾತ್ರ ಅನುಮತಿ ನೀಡಲಾಗುವುದು. ಮುಖಗವಸು ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ. ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ದೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲಾಗುವುದು.

ಹೊರಾಂಗಣ ಸ್ಥಳಗಳಲ್ಲಿ, ಮೈದಾನದ/ ಸ್ಥಳದ ವಿಸ್ತೀರ್ಣವನ್ನು ಗಮನದಲ್ಲಿಟ್ಟುಗೊಂಡು ಮತ್ತು ಸಾಮಾಜಿಕ ಅಂತರದ ಕಟ್ಟುನಿಟ್ಟಿನ ಪಾಲನೆ, ಮುಖಗವಸು ಧರಿಸುವಿಕೆ, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ದೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲಾಗುವುದು.

ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಮಾಲೋಚಿಸಿ, ಅಂತಹ ಸಭೆ ಸಮಾರಂಭಗಳನ್ನು ನಿಯಂತ್ರಿಸಲು ಹೊರಡಿಸುವ ಮಾದರಿ ಕಾರ್ಯನಿರ್ವಹಣಾ ಪ್ರಕ್ರಿಯೆ (SOP) ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ. ಗೃಹ ವ್ಯವಹಾರ ಮಂತ್ರಾಲಯವು ಅನುಮತಿಸಿದ ವಿಮಾನ ಪ್ರಯಾಣವನ್ನು ಹೊರತುಪಡಿಸಿ ಅಂತರ-ರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಇರಲಿದೆ.

Subscribe to our newsletter!

Other related posts

error: Content is protected !!