ಪಾಲಿಕೆ ವ್ಯಾಪ್ತಿಯ ಬೀದಿ ವ್ಯಾಪಾರಸ್ಥರ ಸಮೀಕ್ಷೆ

 ಪಾಲಿಕೆ ವ್ಯಾಪ್ತಿಯ ಬೀದಿ ವ್ಯಾಪಾರಸ್ಥರ ಸಮೀಕ್ಷೆ
Share this post

ಮಂಗಳೂರು ಅ 05: “ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಕಾರ್ಯಕ್ರಮದಡಿಯಲ್ಲಿ ‘ಬೀದಿ ವ್ಯಾಪಾರಸ್ಥರಿಗೆ ಬೆಂಬಲ’ ಘಟಕವನ್ನು ಅನುಷ್ಟಾನಗೊಳಿಸುತ್ತಿದ್ದು,  ಈ ಘಟಕದಡಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ ಗುರುತು ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ಬದಿಗಳಲ್ಲಿ ವ್ಯಾಪಾರ ನಡೆಸುವ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ-ಸೇವಾ ಸಂಸ್ಥೆ/ಸ್ವ-ಸಹಾಯ ಗುಂಪು/ಸಮಾಲೋಚಕರ ಸಂಸ್ಥೆಗಳು ಉಪ ಆಯುಕ್ತರು (ಆಡಳಿತ), ಮಂಗಳೂರು ಮಹಾನಗರಪಾಲಿಕೆಗೆ ನವೆಂಬರ್ 05 ರೊಳಗೆ ಅರ್ಜಿ ಸಲ್ಲಿಸುವಂತೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!