ವಿಕಲಚೇತನರ ಇಲಾಖೆ – ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು ಅ 08 :- ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ/ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅಕ್ಟೋಬರ್ 20 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನುwww.dwdsc.kar.nic.in ವೆಬ್‍ಸೈಟ್‍ನಿಂದ ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ದೂ. ಸಂಖ್ಯೆ: 0824-2458173, 2455999 ನಿಂದ ಪಡೆಯಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.