ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರತಿಭಟನೆ

 ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರತಿಭಟನೆ
Share this post
ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು

ಮಂಗಳೂರು, ಅ 14: ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.

ಸರಕಾರಿ ನೌಕರರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಕಂಪ್ಯೂಟರ್ ತರಬೇತಿ ನಡೆಸಲು ಯೋಚಿಸಿದ್ದ ಸಂಘದ ಸ್ವಂತ ಸ್ಥಳದಲ್ಲಿ ಈಗ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯವರು ಅನಧಿಕೃತವಾಗಿ ಅತಿಕ್ರಮಣ ಮಾಡಿ ಹೊಸ ಕಟ್ಟಡ ನಿರ್ಮಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಪ್ರತಿಭಟಿಸಿದರು.

ಪಾಂಡೇಶ್ವರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರು ನೀಡಿದ ನಂತರ ಠಾಣಾಧಿಕಾರಿಯವರು ಕಾಮಗಾರಿಯನ್ನು ತಡೆಹಿಡಿದು, ತನಿಖೆ ಪ್ರಗತಿಯಲ್ಲಿದ್ದರೂ ಸ್ಮಾರ್ಟ್ ಸಿಟಿಯವರು ಮತ್ತೊಮ್ಮೆ ಅನಧಿಕೃತ ಪ್ರವೇಶ ಮಾಡಿ ಹೊಸ ಕಟ್ಟಡ ನಿರ್ಮಿಸಲು ಕಾಮಗಾರಿಯನ್ನು ಆರಂಭಿಸಲು ಪ್ರಯತ್ನಿಸಿರುತ್ತಾರೆ ಎಂದು ಆರೋಪಿಸಿದರು.

ಸ್ಮಾರ್ಟ್ ಸಿಟಿಯ ಈ ಅತಿಕ್ರಮ ಧೋರಣೆಯನ್ನು ಜಿಲ್ಲಾ ಸರಕಾರಿ ನೌಕರರ ಸಂಘವು ಬಲವಾಗಿ ವಿರೋಧಿಸುತ್ತದೆ ಎಂದು ಪ್ರತಿಭಟನಾ ಸಭೆಯಲ್ಲಿ ತಿಳಿಸಲಾಯಿತು.

ಈ ಬಗ್ಗೆ ಮನವಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರ್ ಮತ್ತು ಮಾನ್ಯ ಶಾಸಕರಿಗೆ ಮನವಿಯನ್ನು ಸಲ್ಲಿಸಲಾಗುವುದು.

ಪ್ರತಿಭಟನಾ ಸಭೆಯಲ್ಲಿ ದ.ಕ.ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಜಾಂಜಿ, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!