ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
Share this post

ಮಂಗಳೂರು ಅ 15: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷವೂ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1 ರಂದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅತ್ಯುತ್ತಮ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನೀಡಲಾಗುತ್ತದೆ.  

ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿಗಳನ್ನು ಅಕ್ಟೋಬರ್ 22 ರೊಳಗೆ ಆಹ್ವಾನಿಸಲಾಗಿದೆ.  

ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಿಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ, ಸಂಶೋಧನೆ ಪತ್ರಿಕೋಧ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ, ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರಣೆಗಳನ್ನು  ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ  ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!