ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ನಿಗಮ – ಅರ್ಜಿ ಆಹ್ವಾನ
ಮಂಗಳೂರು ನ 03 : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಬಸ್ಸು ನಿಲ್ದಾಣದ ಹತ್ತಿರ, ಮಂಗಳೂರು ದೂ.ಸಂ: 0824-2456544 ಅಥವಾ ವೆಬ್ಸೈಟ್ www.dbcdc.karnataka.gov.in ಸಂಪರ್ಕಿಸಬಹುದೆಂದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.