ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನಶ್ಚೇತನಕ್ಕೆ ಕ್ರಮ : ಡಾ. ಕೆ.ವಿ ರಾಜೇಂದ್ರ

 ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನಶ್ಚೇತನಕ್ಕೆ ಕ್ರಮ : ಡಾ. ಕೆ.ವಿ ರಾಜೇಂದ್ರ
Share this post
  • ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತದೆ
  • ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದು
  • ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್‍ಬ್ಯಾಕ್ ಪಡೆಯಲು ಅವಕಾಶವಿದೆ

ಮಂಗಳೂರು ನ 05: ಕೋವಿಡ್-19 ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದರು.

ಅವರು ಬುಧವಾರದಂದು ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಯೋಜನೆಯನ್ನು  ಕಳೆದ ಜೂನ್‍ನಿಂದ ಜಾರಿಗೆ ಬಂದಿದ್ದು ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತಿದ್ದು ಇದರ ಮರುಪಾವತಿಯನ್ನ 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದಾಗಿದೆ ಎಂದರು.

ಈ ಯೋಜನೆಯ ಡಿಜಿಟಲ್ ವ್ಯವಹಾರ ಪ್ರೋತ್ಸಾಹ ನೀಡುವುದರೊಂದಿಗೆ ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್‍ಬ್ಯಾಕ್ ಪಡೆಯಲು ಅವಕಾಶವಿದೆ ಎಂದರು.

ಜಿಲ್ಲೆಯು ಮಹಾನಗರ ಪಾಲಿಕೆ. ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಅರ್ಹ ಫಲಾನುಭವಿಗಳಿಂದ ಅರ್ಜಿ ಪಡೆದು ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

 ಈ ಯೋಜನೆಯ ಬಗ್ಗೆ ಅರಿವು ಮೂಡಿಸಿ ಹೂ, ಹಣ್ಣು, ಎಳನೀರು, ಮೀನು, ಗ್ರಹೋಪಯೋಗಿ ವಸ್ತುಗಳು, ತರಕಾರಿ ಮುಂತಾದವುಗಳನ್ನು ತಲೆಹೊರೆ, ತಳ್ಳುಗಾಡಿ, ಸೈಕಲ್, ಮೋಟಾರ್ ಸೈಕಲ್ ಮೂಲಕ ಮನೆಮನೆಗೆ ತೆರಳಿ ಅಥವಾ ಬೀದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಲಾಭವನ್ನು ಪಡೆಯಬಹುದಾಗಿದೆ.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಮಹಾನಗರ ಪಾಲಿಕೆಯ ಜಂಟಿ ಆಯುಕ್ತರು ಸಂತೋಷ್. ಈ,  ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್, ಹಾಗೂ  ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಡೇ-ನಲ್ಮ್ ಅಭಿಯಾನ ವ್ಯವಸ್ಥಾಪಕರು ಹಾಗೂ ಡೇ-ನಲ್ಮ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!