ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ

 ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ
Share this post

ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್ ರಾವ್, ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಟಿ. ಎಸ್. ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ, ಮುರಲಿ ಕಡೆಕಾರ್ ಉಪಸ್ಥಿತರಿದ್ದರು.

ಅಗಲಿದ ಹಿರಿಯ ಕಲಾವಿದ ಎಂ. ಆರ್ ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಡಾ. ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು, ಎಂ. ಗೋಪಿಕೃಷ್ಣ ರಾವ್ ವಂದಿಸಿದರು. ನಾರಾಯಣ ಎಂ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿಯು ರೂ. 10000/- ನಗದನ್ನು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

.

Subscribe to our newsletter!

Other related posts

error: Content is protected !!