ವನಧನ ವಿಕಾಸ ಯೋಜನೆ ಬಗ್ಗೆ ಚರ್ಚೆ

 ವನಧನ ವಿಕಾಸ ಯೋಜನೆ ಬಗ್ಗೆ ಚರ್ಚೆ
Share this post

ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಜಿಲ್ಲಾಪಂಚಾಯತ್‍ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ ಕೇಂದ್ರಗಳನ್ನು ಸ್ಥಾಪಿಸಲು ಕಿರು ಅರಣ್ಯ ಉತ್ಪನ್ನಗಳು ಅತಿ ಹೆಚ್ಚಾಗಿ ದೊರೆಯುವ ತಾಲೂಕು ಕೇಂದ್ರದಲ್ಲಿ ಸ್ಥಾಪಿಸುವ ಬಗ್ಗೆ ಚರ್ಚಿಸಲಾಯಿತು.

ಅತಿ ಹೆಚ್ಚು ದೊರೆಯುವ ಕಿರು ಅರಣ್ಯ ಉತ್ಪನ್ನಗಳಾದ ರಾಂಪತ್ರೆ, ಸೀಗೆಕಾಯಿ, ಕಾಡುಜೇನು, ಮೆಣಸು, ಪುನರ್ಪುಳಿ, ದಾಲ್ಚೀನ್ನಿ, ಕರಿಮೆಣಸು, ಇತ್ಯಾದಿಗಳನ್ನು ಸಂಗ್ರಹಿಸಿ, ಸುವ್ಯವಸ್ಥಿತವಾದ ಮಾರುಕಟ್ಟೆಯನ್ನು ಸ್ಥಾಪಿಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಜರಿದ್ದ ಅಧಿಕಾರಿಗಗಳಿಗೆ ಸೂಚಿಸಿದರು.

ಕಾಡುತ್ಪನ್ನಗಳನ್ನು ಸಂಗ್ರಹಿಸಲು ಅರಣ್ಯ ಇಲಾಖೆಯವರು ಪರಿಶಿಷ್ಟ ವರ್ಗಗದವರಿಗೆ ಯಾವುದೇ ತೊಂದರೆಯನ್ನು ನೀಡಬಾರದು ಸಂಪೂರ್ಣ ಸಹಕಾರ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ಹಾಗೂ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ ಮತ್ತು ಹಂದಿ ಸಾಕಾಣಿಕೆಗಾಗಿ ಅರ್ಜಿ ಸಲ್ಲಿಸಿದ 64 ಫಲಾನುಭವಿಗಳ ಆಯ್ಕೆಯು ಲಾಟರಿ ಎತ್ತುವ ಮೂಲಕ ಮಾಡಲಾಯಿತು.

ಆಯ್ಕೆಯಾದ ಫಲಾನುಭವಿಗಳಿಗೆ ಇಲಾಖಾವತಿಯಿಂದ ಶೇ.50% ರಿಂದ ಶೇ.90% ರವರೆಗೆ ಸಹಾಯಧನ ನೀಡಲಾಗುವುದು ಎಂದರು.

ಆಯ್ಕೆ ಪ್ರಕ್ರಿಯೆಯಲ್ಲಿ ಐ.ಎ.ಎಸ್. ಪ್ರೊಬೆಷನರ್, ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಯ ಉಪ ನಿರ್ದೇಶಕರು, ಲೀಡ್ ಬ್ಯಾಂಕ್ ಮಾನ್ಯೇಜರ್, ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಜಂಟಿ-ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಜಿಲ್ಲಾ ಕೃಷಿ ಮಾರುಕಟ್ಟೆ ಅಧಿಕಾರಿ, ಕೃಷಿ ಮಾರಾಟ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಂಟ್ವಾಳ ಮತ್ತು ಪುತ್ತೂರಿನ ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷರು, ಎನ್.ಆರ್.ಎಲ್.ಎಂ. ಸಂಯೋಜಕರು, ಮತ್ತು ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!