ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದೀಪಾವಳಿ ಸಂದೇಶ
“ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ.”
“ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ.”
ಎಲ್ಲರಿಗೂ ದೀಪಾವಳಿಯ ಶುಭಾಶಯಗಳು.
ಡಿ. ವೀರೇಂದ್ರ ಹೆಗ್ಗಡೆಯವರು