ಕೋವಿಡ್ ಪ್ರಮಾಣಪತ್ರ ವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ

ಮಂಗಳೂರು, ನ 15: ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Also read:
- Petrol and Diesel price in Coastal Karnataka towns
- Today’s Rubber price at Rubber Society- Ujire
- Kateel Sri Durgaparameshwari today’s Alankara
- Daily Panchangam
- Sri Dharmasthala Mela Yakshagana show today