ಭೌತಿಕ ತರಗತಿ: ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

ಮಂಗಳೂರು ನ 17: ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನವೆಂಬರ್ 17 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಹಾಜರುಪಡಿಸಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಒಪ್ಪಿಗೆ ಪತ್ರದ ಮಾದರಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ನೀಡಲಾಗಿದೆ.
ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತೀ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕನ್ನು ಸರಿಯಾಗಿ ಧರಿಸಬೇಕು, ವಿದ್ಯಾರ್ಥಿಗಳು ಮನೆಯಿಂದ ನೀರು ಮತ್ತು ಊಟ ತರಬೇಕು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ದಿನಗಳ ಮೊದಲು ಕೋವಿಡ್-19 ಪರೀಕ್ಷೆ ಮಾಡಿಕೊಂಡು ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ದಲ್ಲಿ ಮಾತ್ರ ತರಗತಿ/ಹಾಸ್ಟೆಲ್‍ಗಳಿಗೆ ಹಾಜರಾಗಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗೆ ಹಾಜರಾಗಬಹುದು ಎಂದು ಕುಲಸಚಿವರು ತಿಳಿಸಿದ್ದಾರೆ.
Also read:
- Sri Dharmasthala Mela Yakshagana show today
- Udupi Sri Krishna Alankara
- Kateel Sri Durgaparameshwari today’s Alankara
- Udupi Mallige and Jaaji today’s price
- Kateel Mela Yakshagana details