ನೂತನ ಕಟ್ಟಡ ಪೂರ್ಣಗೊಳ್ಳುವ ವರೆಗೆ ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರಕ್ಕೆ ಸ್ಥಳಾಂತರ

 ನೂತನ ಕಟ್ಟಡ  ಪೂರ್ಣಗೊಳ್ಳುವ ವರೆಗೆ ಉಡುಪಿ ಜಿಲ್ಲಾಸ್ಪತ್ರೆ ಬ್ರಹ್ಮಾವರಕ್ಕೆ ಸ್ಥಳಾಂತರ
Share this post
ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ

ಉಡುಪಿ, ನ 18: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು  250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ  ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ  ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ  ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ  ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.

ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ಕಾಮಗಾರಿಯ ಸಂದರ್ಭದಲ್ಲಿ  ರೋಗಿಗಳನ್ನು ಹಾಗೂ ಸಂಪೂರ್ಣ ಉಪಕರಣಗಳನ್ನು  ಸ್ಥಳಾಂತರಿಸುವುದು ಅಗತ್ಯವಿದ್ದು, ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವುದು ಅಗತ್ಯವಿದೆ ಎಂದು ಶಾಸಕ ರಘುಪತಿ ಭಟ್ ಮತ್ತು ಎಲ್ಲಾ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಕುರಿತಂತೆ ಬ್ರಹ್ಮಾವರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮೀತ್ ಶೆಟ್ಟಿ ಕೌಡೂರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕುಂದಾಪುರ ಡಿಎಫ್‍ಓ ಆಶೀಶ್ ರೆಡ್ಡಿ, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!