ಮಂಗಳೂರು ನ 18: ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಸಾಂವಿಧಾನಿಕವಾಗಿ ವಾರ್ಡ್ ಸಮಿತಿಗಳನ್ನು ರಚಿಸಲು ಪಾಲಿಕೆಯ ವ್ಯಾಪ್ತಿಯೊಳಗಿನ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 4 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.