ವಿದ್ಯಾರ್ಥಿಗಳಿಗೆ ಕಳೆದ ಸಾಲಿನ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ

 ವಿದ್ಯಾರ್ಥಿಗಳಿಗೆ ಕಳೆದ ಸಾಲಿನ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ
Share this post

ಉಡುಪಿ, ನ 19: ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನವೆಂಬರ್ 17 ರಿಂದ
ಪ್ರಾರಂಭಿಸಲಾಗಿದ್ದು, 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ/ ಸ್ನಾತಕೋತ್ತರ / ಡಿಪ್ಲೋಮಾ / ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಡಿಸೆಂಬರ್ 10 ರ ವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಪ್ರಸಕ್ತ ವರ್ಷದ ಶುಲ್ಕ ಪಾವತಿ ರಶೀದಿಯೊಂದಿಗೆ, 2019-20 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ಸಂಬಂಧಪಟ್ಟ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು,
ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!