ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ – ಅರ್ಜಿ ಆಹ್ವಾನ

 ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ – ಅರ್ಜಿ ಆಹ್ವಾನ
Share this post

ಉಡುಪಿ, ನ 23: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಕಛೇರಿಯಿಂದ 2020-21ರ ಸಾಲಿನಲ್ಲಿ ಶುದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ನೋಂದಾಯಿತ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಿಗೆ ಕಲಾತಂಡಗಳನ್ನು ಪ್ರಾಯೋಜನೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಲಾತಂಡಗಳ ಪ್ರಾಯೋಜನೆ ಕೋರಿ ಅರ್ಜಿ ಸಲ್ಲಿಸುವ ಸಂಘ-ಸಂಸ್ಥೆಯವರು ಸೇವಾಸಿಂಧು ಮುಖಾಂತರ, ತಮ್ಮ ಕಾರ್ಯಕ್ರಮದ 15 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸುವುದು.

“ಸೇವಾಸಿಂಧು” ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಸಂಘ-ಸಂಸ್ಥೆಗಳ ಕಾರ್ಯಕ್ರಮಕ್ಕೆ ಕಲಾತಂಡಗಳನ್ನು ಇಲಾಖೆಯಿಂದ ನಿಯಮಾನುಸಾರ ಪ್ರಾಯೋಜನೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 0820-2986168 ಮೂಲಕ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!