ಕೆ ಎಸ್ ಆರ್ ಟಿ ಸಿ ರಾಜಹಂಸ, ವೋಲ್ವೋ, ಡ್ರೀಮ್ಕ್ಲಾಸ್ ಸಾರಿಗೆಗಳಲ್ಲಿ ಪ್ರಯಾಣದರ ಕಡಿತ

ಉಡುಪಿ, ನ 24: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ ವತಿಯಿಂದ ಕಾರ್ಯಾಚರಣೆಯಾಗುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೋಲ್ವೋ, ನಾನ್ ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್, ಡ್ರೀಮ್ಕ್ಲಾಸ್ ಸಾರಿಗೆಗಳಲ್ಲಿ ನವೆಂಬರ್ 22 ರಿಂದ ಅನ್ವಯವಾಗುವಂತೆ ಪ್ರಯಾಣ ದರದಲ್ಲಿ ಕಡಿಮೆ ಮಾಡಲಾಗಿದೆ.
ಸದರಿ ಸಾರಿಗೆಗಳಿಗೆ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, www.ksrtc.in ಗೆ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದು.
ಸದರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Udupi Declares Holiday for Anganwadis and Schools on June 16 Due to Heavy Rain
- Heavy Rains: School Holiday Declared in Some Taluks of Dakshina Kannada on June 16
- Udupi Sri Krishna Alankara
- Kateel Sri Durgaparameshwari today’s Alankara
- Udupi Mallige and Jaaji today’s price