ರಿಯಾಯಿತಿ ದರದ ಬಸ್ ಪಾಸ್ ನವೀಕರಿಸಲು ಅರ್ಜಿ ಆಹ್ವಾನ

 ರಿಯಾಯಿತಿ ದರದ ಬಸ್ ಪಾಸ್ ನವೀಕರಿಸಲು ಅರ್ಜಿ ಆಹ್ವಾನ
Share this post

ಮಂಗಳೂರು, ನ 24: ಕರ್ನಾಟಕ ರಾಜ್ಯ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಪ್ರಸ್ತುತ ಸಾಲಿನ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್ ಪಾಸ್, ವಿಕಲಚೇತನರ ರಿಯಾಯಿತಿ ಬಸ್ ಪಾಸ್ , ಅಂಧರ ಉಚಿತ ಬಸ್ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಅಥವಾ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಹಾಗೂ ಅಪಘಾತ ಪರಿಹಾರ ನಿಧಿ ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತಿದ್ದು, ಫಲಾನುಭವಿಗಳು https://serviceonline.gov.in/karnataka ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ನಿಗಮದ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ಗೆ ಆಪ್‍ಲೋಡ್ ಮಾಡಿದ ಅರ್ಜಿಯ ಪ್ರತಿಯನ್ನು ಶಾಲಾ-ಕಾಲೇಜು ಮುಖ್ಯೋಪಾಧ್ಯಾಯರ, ಪ್ರಾಂಶುಪಾಲರ ಸೀಲು, ಸಹಿಯೊಂದಿಗೆ ಹಾಗೂ ಆಪ್‍ಲೋಡ್ ಮಾಡಿದ ದಾಖಲೆಗಳ ಪ್ರತಿಗಳನ್ನು ಹಾಗೂ ಪಾಸಿನ ಶುಲ್ಕವನ್ನು ಶಾಲಾ-ಕಾಲೇಜು ಮುಖಾಂತರ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‍ನಲ್ಲಿ ಸಲ್ಲಿಸಿ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಪುತ್ತೂರು ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!