ವಸತಿ ಶಾಲೆ: ಅರ್ಜಿ ಆಹ್ವಾನ

 ವಸತಿ ಶಾಲೆ: ಅರ್ಜಿ ಆಹ್ವಾನ
Share this post

ಕಾರವಾರ, ನ 23: ಕರ್ನಾಟಕ ವಸತಿ ಶಿಕ್ಷಣ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.

6 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಆಸಕ್ತ ವಿದ್ಯಾರ್ಥಿಗಳು ಡಿಸೆಂಬರ್ 1 ರೊಳಗಾಗಿ ಆನ್‍ಲೈನ್ ಅಥವಾ ಆಫ್ ಲೈನ್ ಮೂಲಕ ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿಂದ ಅರ್ಜಿ ನಮೂನೆ ಪಡೆದು ಸಲ್ಲಿಸಲು ಕೋರಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಲ್ಲಾ ಸಮನ್ವಯಾಧಿಕಾರಿಗಳ ಇಮೇಲ್: [email protected] ಗೆ ಪಿಡಿಎಫ್ ಹಾಗೂ ಪಾಸ್ ಪೋರ್ಟ್ ಸೈಜ್ ಫೋಟೋವನ್ನು ಎPಇಉ ಈoಡಿmಚಿಣ ನಲ್ಲಿ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8277340393 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಎಸ್.ಪುರುಷೋತ್ತಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!