ಇಂದಿರಾ ಗಾಂಧಿ ವಸತಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

 ಇಂದಿರಾ ಗಾಂಧಿ ವಸತಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
Share this post

ಕಾರವಾರ, ನ 24: ಅಂಕೋಲಾ ತಾಲೂಕಿನ ಬೇಲೇಕೇರಿ ಹೊಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ ಸ್ವ-ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ವಸತಿ ಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಗೌರವಧನ ನೀಡಲಾಗುವುದು. ಅಭ್ಯರ್ಥಿಯ ವಿದ್ಯಾರ್ಹತೆ; ಬಿಎ,ಬಿಇಡಿ ಹಾಗೂ ಬಿಎಸ್‍ಸಿ ಬಿ.ಇಡಿ(ಸಿಬಿಝಡ್) ಆಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449203033 ಸಂಪರ್ಕಿಸಬಹುದಾಗಿದೆ ಎಂದು ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!