ಧರ್ಮಸ್ಥಳದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಚಾಲನೆ
ಬೆಳ್ತಂಗಡಿ, ನ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಹೇಮಾವತಿ ವಿ. ಹೆಗ್ಗಡೆಯವರು ಚಾಲನೆ ನೀಡಿದರು.
“ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ,” ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ ಎಂದರು.
“ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದು ಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಇಂದಿನ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ. ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದರು.
ಈ ವರ್ಷ ನಿರ್ಗತಿಕರಿಗೆ ಹತ್ತು ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಡಿ. ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬೆಂಗಳೂರಿನ ವಿ. ರಾಮಸ್ವಾಮಿ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾೈಸ್ ಧನ್ಯವಾದವಿತ್ತರು. ನಿರ್ದೇಶಕಿ ಮಮತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು.
ಮುಖ್ಯಾಂಶಗಳು:
- ರಾಜ್ಯದಲ್ಲಿ 10,461 ಮಂದಿಗೆ ವರ್ಷಕ್ಕೆ 8 ಕೋಟಿ ರೂ. ಮಾಸಾಶನ ವಿತರಣೆ ಮಾಡಲಾಗುತ್ತಿದೆ.
- ಬುಧವಾರ ಒಂದು ಕೋಟಿ ರೂ. ವೆಚ್ಛದಲ್ಲಿ ರಾಜ್ಯದೆಲ್ಲೆಡೆ ಏಕ ಕಾಲದಲ್ಲಿ 7,300 ಕಿಟ್ ವಿತರಣೆ.
- ಅಡುಗೆ ಪಾತ್ರೆಗಳು, ಚಾಪೆ, ಹೊದಿಕೆ ಮೊದಲಾದ ಮೂಲಭೂತ ಅವಶ್ಯಕ ವಸ್ತುಗಳು ಕಿಟ್‍ನಲ್ಲಿ ಮನೆ ಬಾಗಿಲಿಗೆ ಒದಗಿಸಲಾಗುವುದು.
- ಸ್ವಾವಲಂಬಿ ಹಾಗೂ ಸ್ವಾಭಿಮಾನಿಗಳಾಗಿ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು.
- ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡಲಾಯಿತು.
Also read:
- Daily Panchangam
- Sri Dharmasthala Mela Yakshagana show today
- Kateel Mela Yakshagana details
- Udupi Sri Krishna Alankara
- Udupi Mallige and Jaaji today’s price