ಪ.ಜಾತಿ/ ಪಂಗಡದ ಕಲಾಸಕ್ತರಿಗೆ ಜಾನಪದ ತರಬೇತಿ

 ಪ.ಜಾತಿ/ ಪಂಗಡದ ಕಲಾಸಕ್ತರಿಗೆ ಜಾನಪದ ತರಬೇತಿ
Share this post

ಉಡುಪಿ, ನ 26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಲ್ಲಿ 3 ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು ಹಾಗೂ ಅರ್ಜಿಯನ್ನು ಇತ್ತೀಚಿಗೆ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 2 ರ ಒಳಗೆ ಸಹಾಯಕ ನಿರ್ದೇಶಕರು, ಡಾ. ಕೆ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2986168 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!