ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆ

 ಶ್ರೀ ಕೃಷ್ಣ ಮಠದಲ್ಲಿ ಮುದ್ರಾಧಾರಣೆ
Share this post

ಉಡುಪಿ, ನ 26, 2020: ಇಂದು ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿ.

ಶ್ರೀ ಕೃಷ್ಣ ಮಠದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.

ಪೇಜಾವರ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು.ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

Subscribe to our newsletter!

Other related posts

error: Content is protected !!