ಉಡುಪಿ ಶ್ರೀ ಕೃಷ್ಣ ಮಠ: ಲಕ್ಷ ದೀಪೋತ್ಸವ ಆರಂಭ

 ಉಡುಪಿ ಶ್ರೀ ಕೃಷ್ಣ ಮಠ: ಲಕ್ಷ ದೀಪೋತ್ಸವ ಆರಂಭ
Share this post

ಉಡುಪಿ, ನ 27: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು  ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು.

ಉತ್ಸವದಲ್ಲಿ   ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ  ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಂಡಿದ್ದರು. 

ಶ್ರೀ ಕೃಷ್ಣ ಮಠದಲ್ಲಿ ಕ್ಷೀರಾಬ್ದಿ

ಉಡುಪಿ, ನ 27: ಉಡುಪಿ ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಉತ್ಥಾನ ದ್ವಾದಶಿಯಂದು ಸಾಯಂಕಾಲ ಕ್ಷೀರಾಬ್ದಿ ನಡೆಯಿತು.

ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ  ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,  ಪೂಜೆ ಮಾಡಿ ಕ್ಷೀರಾಬ್ದಿ ಅರ್ಘ್ಯ ನೀಡಿದರು.

Filed at 5.15 pm

ಉಡುಪಿ ಲಕ್ಷದೀಪೋತ್ಸವ: ಹಣತೆಯನ್ನಿಟ್ಟು ಚಾಲನೆ ನೀಡಿದ ಮಠಾಧೀಶರು

ಉಡುಪಿ, ನ 27: ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು  ಪೇಜಾವರ  ಮಠಾಧೀಶರಾದ  ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು  ಹಣತೆಯನ್ನಿಟ್ಟು  ಚಾಲನೆ ನೀಡಿದರು.

Subscribe to our newsletter!

Other related posts

error: Content is protected !!