ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನ
ಕಾರವಾರ, ಡಿಸೆಂಬರ್ 30, 2020: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಕ್ಕೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಇ-ವಾಣಿಜ್ಯ ಸಂಸ್ಥೆಗಳಾದ zomato, swiggy, uber, amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವಂತ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/-ಗಳ ಸಹಾಯಧನ ಹಾಗೂ ಉಳಿಕೆ ಸಾಲದ ಮೊತ್ತವನ್ನು ಬ್ಯಾಂಕುಗಳ ಮೂಲಕ ಪಡೆಯಬಹುದಾಗಿದೆ.
ಸೌಲಭ್ಯ ಪಡೆಯ ಬಯಸುವ ಅರ್ಜಿದಾರರು ನಿಗದಿತ ನಮೂನೆಯ ಅರ್ಜಿಯನ್ನು ನಿಗಮದ ವೆಬ್ಸೈಟ್: www.dbcdc.karnataka.gov.in ನಲ್ಲಿ ಪಡೆದು ಇ-ವಾಣಿಜ್ಯ ಸಂಸ್ಥೆಯಲ್ಲಿ ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಬಗ್ಗೆ ಸಂಸ್ಥೆಯಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ, ವಾಹನ ಚಾಲನಾ ಪರವಾನಿಗೆ, ಇನ್ವಾಯ್ಸ, ಜಾತಿ ಆದಾಯ, ರೇಶನಕಾರ್ಡ, ಆಧಾರಕಾರ್ಡ ಪ್ರತಿ, ಫೋಟೋ ಇತ್ಯಾದಿ ದಾಖಲೆಗಳೊಂದಿಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಡಿಸೆಂಬರ್ 19 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಹೈ, ಚರ್ಚ್ ಹತ್ತಿರ, ಕಾರವಾರ ವಿಳಾಸಕ್ಕೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-223229ಗೆ ಸಂಪರ್ಕಿಸಬಹುದು ಎಂದು ಕಾರವಾರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.