ಗ್ರಾಮ ಪಂಚಾಯತ್ ಚುನಾವಣೆ: ಅಬಕಾರಿ ಅಕ್ರಮ ಮಾಹಿತಿ ನೀಡಿ

 ಗ್ರಾಮ ಪಂಚಾಯತ್ ಚುನಾವಣೆ: ಅಬಕಾರಿ ಅಕ್ರಮ ಮಾಹಿತಿ ನೀಡಿ
Share this post

ಉಡುಪಿ, ಡಿ 06 2020: ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ.

ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 ಆಗಿರುತ್ತದೆ.

ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆಯ ಅವಧಿಯಲ್ಲಿ , ಯಾವುದೇ ರೀತಿಯ ಅಬಕಾರಿ ಅಕ್ರಮಗಳು ಕಂಡು ಬಂದಲ್ಲಿ ಮೇಲ್ಕಂಡ ದೂರವಾಣಿ ಸಂಖ್ಯೆಗೆ ಅಥವಾ ಅಬಕಾರಿ ಇಲಾಖೆಯ ಟೋಲ್‌ಫ್ರೀ ಸಂಖ್ಯೆ: 1800 4252 550 ಕರೆ ಮಾಡಿ ಮಾಹಿತಿ ನೀಡುವಂತೆ ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!