ತುಳು ಅಕಾಡೆಮಿಯಿಂದ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

 ತುಳು ಅಕಾಡೆಮಿಯಿಂದ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ಡಿ 09 2020:  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಸ್ತುತ ಸಾಲಿನ ತುಳು ಸಾಹಿತ್ಯ – ಸಂಶೋಧನೆ , ತುಳು ಜಾನಪದ ಕ್ಷೇತ್ರ , ತುಳು ನಾಟಕ – ಸಿನಿಮಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಗೌರವ ಪ್ರಶಸ್ತಿಗೆ ಹಾಗೂ ತುಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಕಾವ್ಯ, ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ ತುಳುವಿಗೆ ಭಾಷಾಂತರಿತ ಕೃತಿಗಳನ್ನು ಪುಸ್ತಕಗಳ ಬಹುಮಾನಕ್ಕೆ ಡಿಸೆಂಬರ್ 31 ರೊಳಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು “ತುಳು ಅಕಾಡೆಮಿ ಗೌರವ ಪ್ರಶಸ್ತಿ -2020” ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು “ತುಳು ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ – 2020” ಎಂದು ಬರೆದು, ರಿಜಿಸ್ಟ್ರಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳುಭವನ, ಪೋಸ್ಟ್ ಅಶೋಕನಗರ, ಉರ್ವಸ್ಟೋರ್, ಮಂಗಳೂರು-575006 ಅಥವಾ ಮೊ.ಸಂ: 9901016962 ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!