ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲು

 ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲು
Share this post

ಉಡುಪಿ, ಡಿ15 2020: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್‌ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ.

ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಇಂತಹ ಹಾನಿಕಾರಕ ಫಾರ್ಮಾಲಿನ್‌ಗಳನ್ನು ಬಳಸಿಕೊಂಡು ಅನೈತಿಕ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಂಡು, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ಟೋಲ್ ಫ್ರೀ ನಂ. 1077 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!