ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ
ಉಡುಪಿ, ಡಿಸೆಂಬರ್ 16, 2020: ಕರ್ನಾಟಕದ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾದರು .
ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು .
ರಾಜ್ಯಪಾಲರು ಶ್ರೀಗಳೊಂದಿಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು.
ಗೋಳ್ವಲ್ಕರ್ 1953 ರಲ್ಲಿ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನಲ್ಲಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ಮಾಡಿದ್ದು, ಸಾಕ್ಷರತೆಯ ಕೊರತೆ ಇದ್ದ ಆ ಕಾಲದಲ್ಲಿ ಜನರು ಹೆಬ್ಬೆಟ್ಟೊತ್ತಿ ಬೆಂಬಲಿಸಿದ್ದನ್ನು ಸ್ಮರಿಸಿದರು.
ಅಯೋಧ್ಯಾ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡದ್ದನ್ನು ನೆನಪಿಸಿಕೊಂಡು ಶ್ರೀ ರಾಮ ಮಂದಿರ ನಿರ್ಮಾಣದ ಕಾರ್ಯದಲ್ಲಿ ಪೂರ್ಣ ಬೆಂಬಲಿಸುವುದಾಗಿ ತಿಳಿಸಿದರು.
ಪೇಜಾವರ ಶ್ರೀಗಳು ರಾಜ್ಯಪಾಲರಿಗೆ ಶಾಲು ಹೊದೆಸಿ ಸ್ಮರಣಿಕೆ ಫಲ ಪುಷ್ಠ ಸಹಿತ ಆಶೀರ್ವದಿಸಿದರು . ವಿ ಹಿಂ ಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ಶ್ರೀಗಳ ಆಪ್ತಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ, ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು .