ರಾಷ್ಟ್ರೀಯ ವಿದ್ಯಾರ್ಥಿ ವೇತನ – ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮಂಗಳೂರು, ಡಿ 21, 2020: 2021ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ನವದೆಹಲಿ ವತಿಯಿಂದ ಇ-ಸ್ಕಾಲರ್ ಶಿಪ್ ಯೋಜನೆಯಡಿ ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ www.scholarship.gov.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ, ಮೂಲ ಪ್ರತಿಯನ್ನು ಆಯಾ ತಾಲೂಕಿನ ವಿ.ಆರ್.ಡಬ್ಲೂ ಎಂ.ಆರ್.ಡಬ್ಲೂ ಹಾಗೂ ಯು.ಆರ್.ಡಬ್ಲೂಗಳ ಗ್ರಾಮ ಪಂಚಾಯತ್‍ಗೆ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.disabilityaffairs.gov.in ಹಾಗೂ ದೂ.ಸಂ. 0824-2458173ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.