ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ
ಮಂಗಳೂರು, ಡಿಸೆಂಬರ್ 23, 2020: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕನಗರ ಅಂಚೆ, ಮಂಗಳೂರು ದೂ.ಸಂ: 0824-2451254, 2453071 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.