ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕ್ಯಾಲಂಡರ್ ಬಿಡುಗಡೆ

 ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕ್ಯಾಲಂಡರ್ ಬಿಡುಗಡೆ
Share this post

ಬೆಳ್ತಂಗಡಿ, ಡಿಸೆಂಬರ್ 23, 2020: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 2021ನೇ ಸಾಲಿನ ಕ್ಯಾಲೆಂಡರನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಸಿರಿ ಸಂಸ್ಥೆಯ ಅಧ್ಯಕ್ಷರಾದ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಹಾಗೂ ಘಟಕದ ಸದಸ್ಯರಿಗೆ ಪೂಜ್ಯರು ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ದನ್ ಹಾಗೂ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ, ಹೇಮಂತ್, ವಿನ್ಸೆಂಟ್‍ಲೋಬೋ ಮತ್ತು ಇನ್ನಿತರ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!