ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ

 ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ
Share this post

ಬೆಳ್ತಂಗಡಿ, ಡಿಸೆಂಬರ್ 27, 2020: ಧರ್ಮಸ್ಥಳಲ್ಲಿ ಏಪ್ರಿಲ್ 29, 2021 ಗುರುವಾರದಂದು ಸಂಜೆ 6.48ಕ್ಕೆ ಗೋಧೋಳಿ ಲಗ್ನದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25, 2021 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, 8147263422, 9663464648.

Subscribe to our newsletter!

Other related posts

error: Content is protected !!