ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 287 ಶಾಲೆಗಳಿಗೆ ಬೆಂಚು, ಡೆಸ್ಕ್ ವಿತರಣೆ

 ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 287 ಶಾಲೆಗಳಿಗೆ ಬೆಂಚು, ಡೆಸ್ಕ್ ವಿತರಣೆ
Share this post
ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಹೊಸಪೇಟೆ ಮುಂತಾದ 6 ಜಿಲ್ಲೆಗಳ 287 ಶಾಲೆಗಳಿಗೆ 2550 ಬೆಂಚ್, ಡೆಸ್ಕ್ಗಳನ್ನು ಹಸ್ತಾಂತರಿಸಲಾಯಿತು
ಬೆಂಚ್ ,ಡೆಸ್ಕ್ ವಾಹನಗಳಿಗೆ ಡಾ!ಹೆಗ್ಗಡೆ ಹಸಿರು ನಿಶಾನೆ

ಬೆಳ್ತಂಗಡಿ, ಡಿಸೆಂಬರ್ 28, 2020: ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಜನರಿಗೆ ಸಹಾಯವಾಗುವ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಅದರಲ್ಲಿ ಶಾಲೆಗಳಿಗೆ ಪೀಠೋಪಕರಣ ಕೊಡುವ ಕಾರ್ಯಕ್ರಮವೂ ಒಂದು.

ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಹೊಸಪೇಟೆ ಮುಂತಾದ 6 ಜಿಲ್ಲೆಗಳ 287 ಶಾಲೆಗಳಿಗೆ 2,550 ಬೆಂಚ್, ಡೆಸ್ಕ್ಗಳನ್ನು ಹಸ್ತಾಂತರಿಸಲಾಯಿತು.

“ಕೆಲವು ಶಾಲೆಗಳಲ್ಲಿ ಮಕ್ಕಳು ನೆಲದಲ್ಲಿ ಕುಳಿತು ಶಿಕ್ಷಣ ಪಡೆಯುವುದು, ಹಳೆಯ ಬೆಂಚು, ಡೆಸ್ಕ್ ಗಳಲ್ಲಿ ಕಷ್ಟ ಪಟ್ಟು ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳು ಮುಕ್ತರಾಗಬೇಕು. ಉತ್ತಮ ವ್ಯವಸ್ಥೆಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಲೆಗಳಿಗೆ ಪೀಠೋಪಕರಣ ಒದಗಿಸಲಾಗುತ್ತಿದೆ,” ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

“ಕಳೆದ ಹತ್ತು ವರ್ಷಗಳಲ್ಲಿ 29 ಜಿಲ್ಲೆಗಳ 9213 ಶಾಲೆಗಳಿಗೆ 58915 ಜೊತೆ ಬೆಂಚು, ಡೆಸ್ಕ್ ಗಳನ್ನು ವಿತರಿಸಲಾಗಿದ್ದುಇದಕ್ಕಾಗಿ ಹದಿನೈದು ಕೋಟಿ ತೊಂಬತ್ತೆರಡು ಲಕ್ಷದ ಇಪ್ಪತ್ತಾರು ಸಾವಿರ ರೂಪಾಯಿ ವಿನಿಯೋಗಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10,200 ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಒಂದು ಕೋಟಿ ಎಪ್ಪತ್ತೆಂಟು ಲಕ್ಷದ ಐವತ್ತು ಸಾವಿರ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಬೆಂಚು ಮತ್ತು ಡೆಸ್ಕ್ ಗಳನ್ನು ವಿತರಿಸಲಾಗುವುದು,” ಎಂದರು.

ಈ ಸಂದರ್ಭದಲ್ಲಿ ಹೇಮಾವತಿ ವಿ ಹೆಗ್ಗಡೆ, ಹೆಗ್ಗಡೆಯವರ ಆಪ್ತ ಕಾಯದರ್ಶಿ ವೀರು ವಿ. ಶೆಟ್ಟಿ, ಸಮುದಾಯ ಅಭಿವೃದ್ಧಿ ವಿಭಾಗದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ , ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಯೋಜನಾಧಿಕಾರಿ ಪುಷ್ಪರಾಜ್, ಶ್ರೀಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ಸಮುದಾಯ ಅಭಿವೃದ್ಧಿ ವಿಭಾಗ ಮ್ಯಾನೇಜರ್ ವಿಜ್ಞೇಶ್ ಕಾಮತ್,ಜಗದೀಶ್ ಪೂಜಾರಿ ಮತ್ತು ಮೇಲ್ವಿಚಾರಕ ಮಹಾಬಲ , ಉದ್ಯಮಿ ಮೋಹನ್ ಕುಮಾರ್ ಉಜಿರೆ, ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!