ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ

 ವಿದ್ಯಾರ್ಥಿಗಳಿಗೆ ಕಳೆದ ವರ್ಷದ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ
Share this post

ಮಂಗಳೂರು, ಜನವರಿ 01, 2021 : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಪ್ರಾರಂಭವಾಗಿರುವುದರಿಂದ ಎಲ್ಲಾ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದ ಬಸ್ ಪಾಸ್ ಪಡೆಯಲು ಅನುಕೂಲವಾಗುವಂತೆ ಕಳೆದ ವರ್ಷದ (2019-20) ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನ ಶಾಲಾ/ ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಲಾಸದಲ್ಲಿರುವ ಶಾಲಾ ಕಾಲೇಜುಗಳಿಗೆ ತೆರಳಲು ಜನವರಿ 31, 2021 ರವರೆಗೆ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ಕ್ರಮ ಕೈಗೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಜನವರಿ ೧ ರಂದು ಹೊರಡಿಸಿದ ಸುತ್ತೋಲೆಯಲ್ಲಿ ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹಾಗೂ ಇತರ ಅಧಿಕಾರಿಗಳಿಗೆ ಇದನ್ನು ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!