ವಿಟ್ಲ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆ – ಅರ್ಜಿ ಆಹ್ವಾನ

 ವಿಟ್ಲ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆ –  ಅರ್ಜಿ ಆಹ್ವಾನ
Share this post

ಮಂಗಳೂರು, ಜನವರಿ 10, 2021: ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 2 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವೆಬ್‍ಸೈಟ್ –www.anganwadirecruit.kar.nic.in ನಲ್ಲಿ ಫೆಬ್ರವರಿ 6 ರೊಳಗೆ ಅರ್ಜಿ ಸಲ್ಲಿಸಬೇಕು.  

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ವಿಟ್ಲ ರಿಹಾ ಪ್ಲಾನೆಟ್ ಚಂದ್ರನಾಥ ಬಸದಿ ಎದುರು, ಪುತ್ತೂರು ರಸ್ತೆ, ಬಂಟ್ವಾಳ ತಾಲೂಕು ದೂ. ಸಂಖ್ಯೆ: 08255-238080 ಸಂಪರ್ಕಿಸಬಹುದು ಎಂದು ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Subscribe to our newsletter!

Other related posts

error: Content is protected !!