ತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ವಿಧಾನ

 ತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ವಿಧಾನ
Share this post

ಮಂಗಳೂರು ತೋಟಗಾರಿಕೆ ಇಲಾಖೆ ವತಿಯಿಂದತೆಂಗು ಹಾಗೂ ಗೇರು ಬೆಳೆಯಲ್ಲಿ ಕೀಟ ನಿಯಂತ್ರಣ ಮಾಡುವ ಬಗ್ಗೆ ಮಾಹಿತಿ

ಮಂಗಳೂರು, ಜನವರಿ 20, 2021: ತೆಂಗು ಬೆಳೆಯಲ್ಲಿ ನುಸಿ ಕೀಟಗಳು ಉಂಟಾದಾಗ ಎಳೆಯ ಕಾಯಿಗಳ ಮೇಲೆ ತೊಟ್ಟಿನ ಕೆಳಭಾಗದಲ್ಲಿ ರಸವನ್ನು ಹೀರುತ್ತವೆ. ಕಾಯಿ ಬೆಳೆದು ದಪ್ಪವಾದಂತೆಲ್ಲಾ ತೊಟ್ಟಿನ ಒಳಗಿನಿಂದ ತ್ರಿಕೋಣಾಕಾರದ ಬಿಳಿ ಮಚ್ಚೆಗಳು ಕಾಣಿಸುತ್ತವೆ. ನಂತರ ಕಾಯಿಗಳ ಮೇಲೆ ಕಂದು ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ಅದೇಜಾಗದಲ್ಲಿಉದ್ದನೆಯ ಬಿರುಕುಗಳು ಉಂಟಾಗುತ್ತವೆ. ಈ ಬಿರುಕುಗಳಿಂದ ಅಂಟು ಪದಾರ್ಥ ಹೊರಬರುತ್ತವೆ. ಬಾಧೆಗೊಳಗಾದ ಎಳೆ ಕಾಯಿಗಳು ಉದುರುತ್ತವೆ.

ಪರಿಹಾರ: ಈ ಸಂದರ್ಭದಲ್ಲಿನೀರಿನಲ್ಲಿ ಕರಗುವಗಂಧಕ 5 ಗ್ರಾಂ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಕಾಯಿಗೊಂಚಲಿಗೆ ಸಿಂಪಡಿಸಲು ಈ ತಿಂಗಳು ಸೂಕ್ತವಾಗಿದೆ. ಇದರಿಂದ ತೆಂಗು ಬೆಳೆಯಲ್ಲಿ ನುಸಿ ಕೀಟಗಳ ನಿರ್ವಹಣೆಮಾಡಬಹುದಾಗಿರುತ್ತದೆ.

ಗೇರು ಬೆಳೆಯಲ್ಲಿ ಟೀ ಸೊಳ್ಳೆಗಳ ಉತ್ಪತ್ತಿಯಾದಾಗಟೀ ಸೊಳ್ಳೆ ಎಲೆಗಳು, ಹೂವುಗಳು, ಹಣ್ಣುಗಳು ಮತ್ತು ಬೀಜಗಳಿಂದ ರಸ ಹೀರುತ್ತವೆ. ಇದರಿಂದ ಎಲೆಗಳು ಮುರುಟಾಗುವುದು, ರೆಂಬೆಗಳು ಮತ್ತು ಹೂವುಗಳು ಒಣಗುತ್ತವೆ. ಬೀಜಗಳು ಮುರುಟಾಗುತ್ತವೆ ಮತ್ತು ಅವುಗಳ ಮೇಲೆ ಕಜ್ಜಿಯಂತಹ ಚುಕ್ಕೆಗಳಾಗುತ್ತವೆ.             

ಪರಿಹಾರ: ಗೇರು ಬೆಳೆಯಲ್ಲಿ ಟೀ ಸೊಳ್ಳೆಗಳ ನಿರ್ವಹಣೆಗೆ ಲ್ಯಾಂಬ್ಡಸೈಲೋಥ್ರಿನ್ 1 ಮಿ.ಲೀ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ರಿಶಲ್‍ಡಿಸೋಜ, ತೋಟಗಾರಿಕೆ ವಿಷಯತಜ್ಞರು, ಮಂಗಳೂರು ದೂರವಾಣಿ ಸಂಖ್ಯೆ: 8277806372 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Subscribe to our newsletter!

Other related posts

error: Content is protected !!