ರೈಲುಗಳಲ್ಲಿ ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ: ಡಾ. ಬೇಳೂರು ರಾಘವೇಂದ್ರ ಶೆಟ್ಟಿ

 ರೈಲುಗಳಲ್ಲಿ ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ: ಡಾ. ಬೇಳೂರು ರಾಘವೇಂದ್ರ ಶೆಟ್ಟಿ
Share this post
Beluru Raghavendra Shetty
ಸಹ ಕೆಲಸಗಾರರ ಜತೆ ಮಡಕೆ ತಯಾರಿಸಿ ಕೆಲಸಗಾರರಿಗೆ ಪ್ರೋತ್ಸಾಹಿಸಿದ ಡಾ. ಬೇಳೂರು ರಾಘವೇಂದ್ರ ಶೆಟ್ಟಿ

ಉಡುಪಿ ಜನವರಿ 24, 2021: ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಹೇಳಿದ್ದಾರೆ.

ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಗುರುವಂದನಾ ಪಾಟರಿ ಪ್ರೊಡಕ್ಟ್ ಸಂಸ್ಥೆಗೆ ಶನಿವಾರ ಭೇಟಿ ನೀಡಿದ ಅವರು ಅಲ್ಲಿನ ಮಡಕೆ ತಯಾರಿಕೆ ಮತ್ತು ಮಣ್ಣಿನ ಉತ್ಪನ್ನಗಳ ಕುರಿತು ಮಾಹಿತಿ ಪಡೆದರು. ಅಲ್ಲಿನ ಕರಕುಶಲ ವಸ್ತುಗಳನ್ನು ವೀಕ್ಷಿಸಿ ಸಹ ಕೆಲಸಗಾರರ ಜತೆ ಮಡಕೆ ತಯಾರಿಸಿ, ಕೆಲಸಗಾರರಿಗೆ ಪ್ರೋತ್ಸಾಹಿಸಿದರು.

ಈ ವೇಳೆ ಮಾತನಾಡಿದ ಅವರು, ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ ಮಾಡುವ ಮೂಲಕ ಕುಂಬಾರರಿಗೆ ಉತ್ತೇಜನ ನೀಡಲು ಕೇಂದ್ರ ಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಯೋಜನೆಯಂತೆ ವಿದೇಶಿ ವಸ್ತು ಬಳಕೆ ನಿಲ್ಲಿಸಿ, ನಮ್ಮ ವಸ್ತುಗಳನ್ನು ಬಳಸಿ, ನಮ್ಮ ಜನರನ್ನು ಬೆಳೆಸಿ ಎಂಬ ಘೋಷಣೆ ಅಡಿಯಲ್ಲಿ ಕರ್ನಾಟಕದಲ್ಲಿ ಕರಕುಶಲ ಕರ್ಮಿಗಳನ್ನು ಪ್ರೋತ್ಸಾಹಿಸಿ ಉತ್ತೇಜಿಸಲಾಗವುದು ಎಂದು ಭರವಸೆ ನೀಡಿದರು.

Beluru Raghavendra Shetty
ಆಲೂರು ಗ್ರಾಮದ ಗುರುವಂದನಾ ಪಾಟರಿ ಪ್ರೊಡಕ್ಟ್ ಸಂಸ್ಥೆಯಲ್ಲಿ ಡಾ. ಬೇಳೂರು ರಾಘವೇಂದ್ರ ಶೆಟ್ಟಿ

ರಾಜಸ್ಥಾನದ ಮಡಿಕೆಗಳು ಗಟ್ಟಿಯಾಗಿರುತ್ತವೆ. ನಮ್ಮ ಭಾಗದ ಮಡಿಕೆಗಳು ಮೃದುವಾಗಿರುತ್ತವೆ. ಅಲ್ಲಿಯ ತಂತ್ರಜ್ಞಾನ ಬಳಕೆ ಮಾಡಿ ಇಲ್ಲಿಯೂ ಅದೇ ರೀತಿ ಮಡಕೆ ತಯಾರಿಸಲು ಅನುವು ಮಾಡಿಕೊಡಲಾಗುವುದು ಎಂದರು.

ಮುಂಬರುವ ದಿನಗಳಲ್ಲಿ ಉಡುಪಿಯಲ್ಲಿ ಹತ್ತು ದಿನಗಳ ಕಾಲ ಕರಕುಶಲ ವಸ್ತುಗಳ ಪ್ರದರ್ಶನ ಮೇಳ ಆಯೋಜಿಸುವ ಯೋಚನೆಯಿದ್ದು, ಮೇಳದಲ್ಲಿ ಬಿದಿರು, ಶಿಲ್ಪಕಲೆ ಮತ್ತು ಮಣ್ಣಿನ ಉತ್ಪನ್ನಗಳು ಪ್ರದರ್ಶನ ಏರ್ಪಡಿಸಿ ಯುವಜನರಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಸಂಸ್ಕೃತಿಯ ಭಾಗವಾಗಿರುವ ಕರಕುಶಲ ವಸ್ತುಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಕುಂದಾಪುರದಲ್ಲಿ ಕರಕುಶಲ ವಸ್ತುಗಳ ತಯಾರಿಕಾ ಘಟಕ ಪ್ರಾರಂಭಿಸಲು ತೀರ್ಮಾನಿಸಲಾಗಿದ್ದು, ಅದರಲ್ಲಿ ಮಣ್ಣಿನ ಉತ್ಪನ್ನಗಳಿಗಾಗಿ ಪ್ರತ್ಯೇಕ ಒಂದು ಭಾಗ ನಿರ್ಮಿಸಿ, ಉತ್ಪಾದನಾ ಮತ್ತು ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಉಡುಪಿಯಲ್ಲಿ ಹೊಸದಾಗಿ ಪ್ರಾರಂಭಿಸಲು ತೀರ್ಮಾನಿಸಿರುವ ಮಾರುಕಟ್ಟೆಯಲ್ಲಿ ಮಣ್ಣಿನ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕೆಎಂಎಫ್, ಕರ್ನಾಟಕ ಹಾಲು ಮಹಾಮಂಡಳಿ ಜೊತೆ ಚರ್ಚಿಸಿ ಮೊಸರು ಮತ್ತು ಐಸ್‍ಕ್ರೀಂ ಉತ್ಪನ್ನಗಳಿಗೆ ದೊಡ್ಡ ನಗರಗಳ ಹೊಟೆಲ್ ಉದ್ಯಮಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆಯೂ ಇದೇ ವೇಳೆ ಹೇಳಿದರು.

Subscribe to our newsletter!

Other related posts

error: Content is protected !!