ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟನೆ
ಉಡುಪಿ, ಜನವರಿ, 27 2021: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಜನವರಿ 31 ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಬೆಳಗ್ಗೆ 8 ಗಂಟೆಗೆ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.