ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ

 ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ
Share this post
Karnataka government declares SSLC time table

ಬೆಂಗಳೂರು ಜನವರಿ 28, 2021: ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿ ಪರೀಕ್ಷೆಗಳು 2021ನೇ ಜೂನ್ 14ರಿಂದ ಜೂನ್ 25ರವರಗೆ ನಡೆಯಲಿವೆ ಎಂದರು.

  • ಜೂ. 14- ಪ್ರಥಮ ಭಾಷೆ,
  • ಜೂ. 16- ಗಣಿತ,
  • ಜೂ. 18-ದ್ವಿತೀಯ ಭಾಷೆ,
  • ಜೂ. 21- ವಿಜ್ಞಾನ,
  • ಜೂ. 23- ತೃತೀಯ ಭಾಷೆ,
  • ಜೂ. 25- ಸಮಾಜ ವಿಜ್ಞಾನ

ಪತ್ರಿಕೆಗಳ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿಯನ್ನು ಸಹ ಅಂತಿಮಗೊಳಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಚಿವರು ವಿವರಿಸಿದರು.

ಸಿಎಂ ಜೊತೆ ಚರ್ಚಿಸಿ ಶುಲ್ಕ ನಿಗದಿ:
ಶಾಲಾ ಶುಲ್ಕ ನಿಗದಿ ಕುರಿತಂತೆ ಹಲವು ಸುತ್ತಿನ ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು. .

ಸಭೆಯಲ್ಲಿ ಸಾರಿಗೆ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Subscribe to our newsletter!

Other related posts

error: Content is protected !!